ವಯನಾಡ್‌: ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಸಹಾಯಕ್ಕೆ ತೆರಳುತ್ತಿದೆ.

ಸುರಿಯುತ್ತಿರುವ ಭಾರಿ ಮಳೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಲಪ್ಪುರಂ ಜಿಲ್ಲೆಯ ನೀಲಂಬುರ್‌ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಚಾಲಿಯಾರ್‌ ನದಿಯಲ್ಲಿ ಅನೇಕರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂದಕ್ಕೈ ಪ್ರದೇಶದಲ್ಲಿ ಅನೇಕ ಮನೆಗಳು. ಅಂಗಡಿಗಳು ಮತ್ತು ವಾಹನಗಳು ಜಲಾವೃತಗೊಂಡಿವೆ.