ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು.
ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಹೀಗೆ ಹಲವು ಮೇಳಗಳಲ್ಲಿ ಸೇವೆ ನೀಡಿದ್ದರು. ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಗುರುಪ್ರಸಾದ್ ಪ್ರಚಾರದಲ್ಲಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.