ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಉದ್ಘಾಟಿಸಿದರು.

ಪ್ರಯಾಣಿಕರ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯ ಹಿತ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ನಿಯಮಗಳನ್ನು‌ ಪಾಲಿಸುವ ನಿಟ್ಟಿನಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.

ಈ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲೆಯ ಶಾಸಕರು, ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು.