ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್‌.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

ಜುಲೈನಲ್ಲೂ ಇದೇ ರೀತಿಯಾಗಿ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಗಲೂ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ವೈದ್ಯರ ನಿಗಾದಲ್ಲಿರಿಸಲಾಗಿತ್ತು.ಸದ್ಯ ಅವರಿಗೆ ನರವಿಜ್ಞಾನ ವಿಭಾಗದ ಡಾ.ವಿನೀತ್‌ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದಾರೆ.