ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ “ಕೃಷಿ ಸಿಂಚಾಯಿ ಯೋಜನೆ” ( ಹರ ಖೇತ ಕೋ ಪಾನಿ HKKP – SMI ) ಯೋಜನೆಯಡಿ ಕಾಮಗಾರಿಗಳ ಪ್ರಾರಂಭಕ್ಕೆ ತಯಾರಿಸಿದ ಸುಮಾರು ರೂ.122.75 ಕೋಟಿ ಅಂದಾಜು ಮೊತ್ತದ ಪ್ರಸ್ತಾವನೆಗೆ ಅನುಮೋದನೆ ಕೋರಿ ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವಾಲಯಕ್ಕೆ ಮನವಿ ಕಳುಹಿಸಿದ್ದು, ಅದಕ್ಕೆ ಶೀಘ್ರ ಅನುಮೋದನೆ ಸೂಚಿಸುವಂತೆ ಕೋರಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ಜಲ ಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಮನವಿ ಅರ್ಪಿಸಿ, ಒತ್ತಾಯಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಪ್ರಸ್ತಾಪಿತ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ದೊರೆಯುವ ಭರವಸೆ ಇದೆ ಎಂದು ಜಗದೀಶ ಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.