ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.