ಬೆಳಗಾವಿ :
ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯನ್ನು ಡಿಸೆಂಬರ್ 13ರಂದು ಸಂಜೆ 7 ಕ್ಕೆ ಬೆಳಗುಂದಿ-ರಕ್ಕಸಕೊಪ್ಪ ರಸ್ತೆಯ ಶೂನ್ಯ ಫಾರಂ ರೀಟ್ರೀಟ್ (Shoonya Faram Reatreat)ನಲ್ಲಿ ಕರೆಯಲಾಗಿದೆ.
ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾ ನಾಯಕ ಎನ್. ಎಸ್. ಭೋಸರಾಜು ಮತ್ತು ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಉಪಸ್ಥಿತರಿರುವರು. ಎಲ್ಲಾ ಸದಸ್ಯರು ತಪ್ಪದೆ ಶಾಸಕಾಂಗ ಸಭೆಯಲ್ಲಿ ಭಾಗವಹಿಸುವಂತೆ ಪಕ್ಷದ ಪ್ರಕಟಣೆ ತಿಳಿಸಿದೆ.