ರಾಯ್ಪುರ:
ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣುದೇವ ಸಾಯಿ ಅವರನ್ನು ಭಾನುವಾರ ಆಯ್ಕೆ ಮಾಡಿದ ಕೆಲವೇ ಗಂಟೆಗಳ ನಂತರ ಬಿಜೆಪಿಯು ನಾಯಕರಾದ ವಿಜಯ ಶರ್ಮಾ ಮತ್ತು ಅರುಣ್ ಸಾವೊ ಅವರನ್ನು ಛತ್ತೀಸ್‌ಗಢದ ನೂತನ ಉಪಮುಖ್ಯಮಂತ್ರಿಗಳಾಗಿ ಹೆಸರಿಸಿದೆ ಎಂದು ವರದಿಗಳು ತಿಳಿಸಿವೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ 2003 ರಿಂದ 2018 ರವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ರಮಣ್ ಸಿಂಗ್ ಅವರು ಛತ್ತೀಸ್‌ಗಢ ವಿಧಾನಸಭೆಯ ಸ್ಪೀಕರ್ ಆಗಿರುತ್ತಾರೆ.

ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣುದೇವ ಸಾಯಿ ಅವರನ್ನು ಆಯ್ಕೆ ಮಾಡಲಾಗಿದ್ದು, ರಾಜ್ಯದ ಆಡಳಿತವನ್ನು ಯಾರು ವಹಿಸುತ್ತಾರೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿತು.
ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ, ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸುವಿಕೆಯ ಕುರಿತು ಬಿಜೆಪಿಯಿಂದ ತೀವ್ರ ಚರ್ಚೆಗಳು ನಡೆದವು.