ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್. ಅರ್. ರಂಗನಾಥನ್ ಅವರ ಜನ್ಮದಿನವನ್ನು ” ಗ್ರಂಥ ಪಾಲಕರ ದಿನಾಚರಣೆ “ಯನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಜ್ಯೋತಿ ಜೀ. ಹಿರೇಮಠ, ಗ್ರಂಥಪಾಲಕರಾದ ಆರ್. ಎಸ್. ಅಂಬಿ ಹಾಗೂ ಹಿರಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ಅಂಗವಾಗಿ ಎಲ್ಲ ಸಿಬ್ಬಂದಿಯವರಿಗೆ ಮತ್ತು ವಿದ್ಯಾರ್ಥಿಗಳಿಗಾಗಿ ವಿವಿಧ ಲೇಖಕರ / ಪ್ರಕಾಶಕರ ಪುಸ್ತಕಗಳನ್ನು ಪರಿಚಯ ಮಾಡಿಕೊಳ್ಳಲು ವೇದಿಕೆಯನ್ನು ಒದಗಿಸಲಾಗಿತ್ತು. 200 ಕ್ಕೂ ಹೆಚ್ಚು ಪುಸ್ತಕಗಳ ಶೀರ್ಷಿಕೆಗಳನ್ನು ಪ್ರದರ್ಶನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದಿಂದ ಸುಮಾರು 25 ಕ್ಕಿಂತ ಹೆಚ್ಚು ಸಿಬ್ಬಂದಿ ಹಾಗೂ 75 ರಿಂದ 100 ಕ್ಕು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.