ಹೆಬ್ರಿ : ವಿದ್ಯಾಭಾರತಿ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿಯಲ್ಲಿ ನಡೆಸಿದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಿ ಆರ್ ಎನ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ತಂಡದ ಸದಸ್ಯರೊಂದಿಗೆ ಪ್ರಾಂಶುಪಾಲ ಅಮರೇಶ್ ಹೆಗ್ಡೆ , ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕಿ ಪಾವನ ಉಪಸ್ಥಿತರಿದ್ದಾರೆ. ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.