ಬೆಳಗಾವಿ : ಹುಕ್ಕೇರಿ ತಾಲೂಕಿನ ಪಾಚ್ಛಾಪುರದ ಶ್ರೀ ರಾಘವೇಂದ್ರ ಸ್ವಾಮಿಗಳ 48 ನೆಯ ಆರಾಧನಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ, ಸಾಹಿತಿ ಎಲ್. ಎಸ್. ಶಾಸ್ತ್ರಿ ಮತ್ತು ಡಾ. ಪಿ. ಜಿ. ಕೆಂಪಣ್ಣವರ ಅವರಿಗೆ “ಪರಿಮಳ ಪುರಸ್ಕಾರ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಮತ್ತು ಶ್ರೀ ನಿಶ್ಚಲಾನಂದ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಡಾ. ಬಸವರಾಜ ಜಗಜಂಪಿ ಅವರ ಅಧ್ಯಕ್ಷತೆಯಲ್ಲಿ ಈ ಸಮಾರಂಭ ಜರುಗಿತು. ಕಮಿಟಿ ಅಧ್ಯಕ್ಷ ಶಿರೀಷ ಜೋಷಿ, ರಾಮಚಂದ್ರ ಕಾಕಡೆ, ಮಠಪತಿ ಮೊದಲಾದವರು ಉಪಸ್ಥಿತರಿದ್ದರು.