ದೆಹಲಿ: ಜೆಎಂಎಂ ನಾಯಕ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಆಗಸ್ಟ್ 30 ರಂದು ರಾಂಚಿಯಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಆ.30 ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಚಿತ್ರವನ್ನು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಾರ್ಖಂಡ್ ಬಿಜೆಪಿ ಸಹ ಉಸ್ತುವಾರಿ ಆಗಿರುವ ಹಿಮಂತ್ ಸಹ ಸೊರೇನ್ ಅವರ ಜೊತೆಗೆ ಇದ್ದರು.