ಬೆಳಗಾವಿ : ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ತಂಡ ರಾತ್ರಿ ಅಪಹರಣ ಮಾಡಲಾಗಿದೆ.
ನಾಗರಾಜ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಾಗ, ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ಅಪಹರಣ ಮಾಡಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.
ಸೆ.3ರಂದು ಚುನಾವಣೆ ನಿಗದಿಯಾಗಿದೆ. 9 ಬಿಜೆಪಿ ಸದಸ್ಯರು, 5 ಕಾಂಗ್ರೆಸ್ ಸದಸ್ಯರು, ನಾಲ್ವರು ಪಕ್ಷೇತರ ಸದಸ್ಯರು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ 4 ಪಕ್ಷೇತರ ಸದಸ್ಯರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಗಾದಿಗೆ ಏರಲು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಬಿಜೆಪಿ ಸದಸ್ಯನ ಅಪಹರಣ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಕಾರ್ಯಕರ್ತರು ತಡರಾತ್ರಿ ಕಿತ್ತೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.
ಇಂದು ಪ್ರತಿಭಟನೆ :
ನಿನ್ನೆ ರಾತ್ರಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿಯವರನ್ನು ಕಾಂಗ್ರೆಸ್ ನಾಯಕರ ಅಣತಿಯಂತೆ ಅಪಹರಣ ಮಾಡಿರುವವರನ್ನು ತಕ್ಷಣ ಪತ್ತೆಮಾಡಿ, ಪ.ಪಂ ಸದಸ್ಯನನ್ನು ಹುಡುಕಿ ಅವರ ಕುಟುಂಬಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ
ಇಂದು 30.08.2024 ರಂದು ಮಧ್ಯಾಹ್ನ 12.30 ಘಂಟೆಗೆ
ಬೆಳಗಾವಿ ಎಸ್.ಪಿ ಯವರಿಗೆ ಅವರ ಕಚೇರಿಯಲ್ಲಿ ಮನವಿ ನೀಡಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟಣೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.