ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಬೆಳಗಾವಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದಿಂದ ಗಣೇಶ ಹಬ್ಬ ಆಚರಣೆ ವಿಜೃಂಭಣೆಯಿಂದ ನೆರವೇರಿದೆ.

ಬೆಳಗಾವಿಯಲ್ಲಿ ಪ್ರತಿ ವರ್ಷ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಯೊಂದು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ.
ಅದೇ ರೀತಿ ಈ ವರ್ಷವೂ ಸಹಾ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಹೆಬ್ಬಾಳ್ಕರ್ ಪರಿವಾರದ ಸದಸ್ಯರು ಭಾಗವಹಿಸಿದ್ದರು. ಜೊತೆಗೆ ಹೆಬ್ಬಾಳ್ಕರ್ ಅವರ ಅಭಿಮಾನಿಗಳು ಭಾಗವಹಿಸಿದ್ದು ಹಬ್ಬಕ್ಕೆ ಇನ್ನಷ್ಟು ಮೆರಗು ನೀಡಿತು.