ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಬೆಳಗಾವಿ ಜಿಲ್ಲೆಗೆ ಒಲಿದು ಬಂದರೆ ಸಂತೋಷವಾಗುತ್ತದೆ. ನಾನು ವೈಯಕ್ತಿಕವಾಗಿ ಅದನ್ನು ಸ್ವಾಗತಿಸುವುದಾಗಿ ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕೋಡಿ ತಾಲೂಕು ಕರಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರವಾಗಿ ಒಂದು ವೇಳೆ ಬದಲಾವಣೆ ಆದರೆ ನಮ್ಮ ಸ್ವಂತ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಹುದ್ದೆ ಒಲಿದು ಬಂದರೆ ಅದನ್ನು ನಾನು ಸ್ವಾಗತಿಸುತ್ತೇನೆ. ಯಾಕೆಂದರೆ, ಇಲ್ಲಿಯವರೆಗೆ ಬೆಳಗಾವಿ ಜಿಲ್ಲೆಯವರಿಗೆ ಮುಖ್ಯಮಂತ್ರಿಯ ಸ್ಥಾನ ಸಿಕ್ಕಿಲ್ಲ. ಮುಖ್ಯಮಂತ್ರಿ ಬದಲಾವಣೆ ಆದರೆ ಬೆಳಗಾವಿ ಜಿಲ್ಲೆಯವರೇ ಆಗಿರುವ ಸತೀಶ ಜಾರಕಿಹೊಳಿಯವರ ಪರವಾಗಿ ಅವರು ಪರೋಕ್ಷವಾಗಿ ಇದೀಗ ಬೆಂಬಲ ಸೂಚಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.