ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬರುತ್ತಿರುವ ನಡುವೆಯೂ ಒಂದೊಮ್ಮೆ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರೆ ತಮಗೆ ಈ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯರು ಆಗಾಗ ತಮ್ಮ ಮನದಾಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಸವರಾಜ ರಾಯರೆಡ್ಡಿ ಮತ್ತು ಸಚಿವ ಶರಣಬಸವ ದರ್ಶನಾಪುರ ಅವರು ಅವಕಾಶ ಸಿಕ್ಕರೆ ತಾವು ಮುಖ್ಯಮಂತ್ರಿ ಆಗಲು ಸಿದ್ದ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಪರಮೇಶ್ವರ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ನಾಯಕರು ತಾವು ಸಹಾ ಮುಖ್ಯಮಂತ್ರಿ ರೇಸ್ ನಲ್ಲಿ ಇರುವುದಾಗಿ ಈಗಾಗಲೇ ಹೇಳಿದ್ದಾರೆ. ಈಗ ಆ ಪಟ್ಟಿಗೆ ಮತ್ತೆರಡು ಹೊಸ ಹೆಸರುಗಳು ಸೇರ್ಪಡೆಗೊಂಡಿವೆ.