ಬೆಳಗಾವಿ : ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು.

ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.