ಹೆಬ್ರಿ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಹೆಬ್ರಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕರು ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ವಿಜೇತ ವಿದ್ಯಾರ್ಥಿಗಳ ತಂಡಕ್ಕೆ ಕಾಲೇಜು ಪ್ರಾಂಶುಪಾಲ ಅಮರೇಶ್ ಹೆಗ್ಡೆ , ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕಿ ಪಾವನ ಶೆಟ್ಟಿ,.ಕಾಲೇಜು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿರುತ್ತಾರೆ.