ಮಂಗಳೂರು: ರಾಜ್ಯದ ಪ್ರತಿಷ್ಠಿತ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಗುರುವಾರ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೊನೆಯ ಐದೂವರೆ ತಿಂಗಳ ಅವಧಿಗೆ ಮೇಯರ್ ಆಗಿ ವಾರ್ಡ್ ನಂಬರ್ 17ರ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆಯಾಗಿದ್ದಾರೆ.

ಉಪ ಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್, ಉಪ ಮೇಯ‌ರ್ ಹುದ್ದೆಗೆ ಚುನಾವಣೆ ನಡೆಯಿತು. ಮೇಯರ್ ಹುದ್ದೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು.

ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27ರ ವರೆಗೆ ಇರಲಿದೆ. ಐದೂವರೆ ತಿಂಗಳು ಮಾತ್ರ ಮೇಯರ್, ಉಪ ಮೇಯರ್ ಅಧಿಕಾರಾವಧಿ ಇರಲಿದೆ. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್‌. ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ನಿರ್ವಹಿಸಿದರು. ಪ್ರಕ್ರಿಯೆ

ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್ ಡಿಪಿಐ ಇಬ್ಬರು ಸದಸ್ಯ ಬಲವನ್ನು ಹೊಂದಿದೆ. ಚುನಾವಣೆಯಲ್ಲಿ ಸಂಸದ, ಶಾಸಕರು ಸೇರಿ 47 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಇತ್ತು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಉಪಸ್ಥಿತರಿದ್ದರು.