ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ದಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೋರ್ವಳ ಬರ್ಬರ ಹತ್ಯೆ ಮಾಡಲಾಗಿದೆ.
ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಯುವತಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಘಟನೆ ಈಗ ಇಡೀ ರಾಜ್ಯವನ್ನೇ ಅಲ್ಲೋಲಕಲ್ಲೋಲ ಮಾಡಿದೆ ಇಷ್ಟಕ್ಕೂ ಈತ ಕೊಲೆ ಮಾಡಿರುವುದು ಯಾಕೆ ಎನ್ನುವುದು ಇಷ್ಟರಲ್ಲೇ ಗೊತ್ತಾಗಬೇಕಾಗಿದೆ.