ಕಾರವಾರ : ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಉದ್ಯಮಿ ವಿನಾಯಕ ನಾಯ್ಕ (58) ಕೊಲೆಯಾದ ವ್ಯಕ್ತಿಯಾಗಿದ್ದು, ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ರಕ್ತದೋಕುಳಿ ಹರಿದಿದೆ. ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಲೆ ಮಚ್ಚು ಬೀಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ (ಇಂದು) ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ.
ಊರಿಗೆ ಬಂದಾಗ ಘಟನೆ : ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ ದುಷ್ಕರ್ಮಿಗಳ ಗುಂಪು ತಲ್ವಾರ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ.
ನಾಲ್ಕರಿಂದ ಐದು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಲೆ ಯಾರೂ ಮಾಡಿದರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.