ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ನಮ್ಮ ಸಮಾಜದ ಸಭೆಗೆ ದಿನಾಂಕ, ಸಮಯ ನಿಗದಿ ಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡಲಾಗುವುದು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಬಗ್ಗೆ ಸರಕಾರದ ಮೇಲೆ ಒತ್ತಡ ತರಲು ಇದೇ ಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಸಮಾವೇಶ ನಡೆಸಲಾಗುತ್ತಿದೆ. 2 ಎ ಮೀಸಲಾತಿ ನೀಡುವ ಬಗ್ಗೆ ಸರಕಾರ ಶಾಸಕರು ಹಾಗೂ ಸ್ವಾಮೀಜಿಗಳ ಮಾತಿಗೆ ಗೌರವ ಕೊಡಲಿಲ್ಲ. ಈಗ ವಕೀಲರ ಮೂಲಕ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿಸಿದರು.