ಬೆಳಗಾವಿ : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಮೋಹನ ಆಳ್ವ ಅವರನ್ನು ನಗರದಲ್ಲಿ ರವಿವಾರ ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ವತಿಯಿಂದ ಸನ್ಮಾನಿಸಲಾಯಿತು.
ಮೈತ್ರಿಕೂಟದ ಗೌರವಾಧ್ಯಕ್ಷ ಶಿರ್ಲಾಲು ಬಿ. ಗುಣಪಾಲ ಹೆಗ್ಡೆ, ಅಧ್ಯಕ್ಷ ಮಹಾವೀರ ಪೂವಣಿ, ಉಪಾಧ್ಯಕ್ಷ ಅಜಿತ್ ಕುಮಾರ ಜೈನ್ ಮತ್ತು ಕಾರ್ಯದರ್ಶಿ ವೀರೇಂದ್ರ ಹೆಗ್ಡೆ ಉಪಸ್ಥಿತರಿದ್ದರು.