ಬೆಳಗಾವಿ: ಕೆಎಲ್‌ಎಸ್‌ನ ರಾಜಾ ಲಖಮಗೌಡ ಕಾನೂನು ಕಾಲೇಜು ಎನ್‌ಎಸ್‌ಎಸ್ ಘಟಕವು ಆರ್‌ಎಲ್‌ ಕಾನೂನು ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರವನ್ನು ಏರ್ಪಡಿಸಲಾಗಿತ್ತು.

ಬೆಳಗಾವಿಯ ಮುಚ್ಚಂಡಿ ಗ್ರಾಮದಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರವು ಸೆ.24 ರಿಂದ ಸೆ.30 ರವರೆಗೆ ನಡೆಯಲಿದೆ.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ವಿದ್ಯಾ ವಿ. ದೇಶಪಾಂಡೆ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ಸಣ್ಣ ಕಥೆಯಿಂದ ಏಕತೆಯ ಮಹತ್ವದ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಎ.ಎಚ್.ಹವಾಲ್ದಾರ್ ಅಧ್ಯಕ್ಷತೆ ವಹಿಸಿ, ಎನ್.ಎಸ್.ಎಸ್ ಘಟಕದ ಮಹತ್ವದ ಪಾತ್ರದ ಕುರಿತು ತಿಳಿಸಿದರು.

ಐಕ್ಯೂಎಸಿ ಅಡಿಯಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕ ಆಯೋಜಿಸಿದ್ದ ಸಮಾರಂಭದಲ್ಲಿ ಸಹಾಯಕ ಪ್ರೊ.ಮಂಜುನಾಥ ಕಾಳೆ ಸ್ವಾಗತಿಸಿದರು. ಮಲ್ಲಿಕಾರ್ಜುನ ಪೂಜಾರಿ ನಿರೂಪಿಸಿದರು. ಪವನ್ ಶಿರೋಳ ಪ್ರಾಸ್ತಾವಿಕ ಮಾತನಾಡಿದರು. ಸಂಜನಾ ಇಟಗಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.