ಹೆಬ್ರಿ : ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹೆಬ್ರಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ಸ್ನೇಹ , ಸ್ವಾತಿ , ದೀಕ್ಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ತಂಡದ ಸದಸ್ಯರೊಂದಿಗೆ ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕಿ ಪಾವನ ಶೆಟ್ಟಿ ಉಪಸ್ಥಿತರಿದ್ದರು.