ಮಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಉಚಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಕಾನೂನು ಹೋರಾಟ ಮಾಡಲು ಮುಖ್ಯಮಂತ್ರಿಗೆ ಅವಕಾಶ ಇದೆ. ಆದರೆ, ಸಾರ್ವಜನಿಕರ ದೃಷ್ಟಿಯಲ್ಲಿ ರಾಜೀನಾಮೆ ನೀಡುವುದು ಸರಿ ಸಿದ್ದರಾಮಯ್ಯ ಅವರು ನಾನೇನು ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ, ಈಗ ಆರೋಪಗಳಿಗೆ ಸಂಬಂಧಿಸಿದ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ ಮೇಲೆ ಪ್ರಕರಣ ಅಂತ್ಯವಾಗುತ್ತದೆ. ಅದು ಅನಂತರದ ವಿಷಯ. ಆದರೆ, ಸದ್ಯ ಗಂಭೀರ ಆರೋಪ ಬಂದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.