ಬೆಳಗಾವಿ : ನಗರದ ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಜರುಗಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಸದಸ್ಯತ್ವ ಅಭಿಯಾನ ಬೆಳಗಾವಿ ವಿಭಾಗದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷ ಬಲವರ್ಧನೆ ದೃಷ್ಟಿಯಿಂದ ಸಕ್ರಿಯರಾಗಬೇಕೆಂದು ಹೇಳಿದರು.

ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಕರೆ ನೀಡಿದರು.

ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ ಪಾಟೀಲ, ಸಿದ್ದು ಸವದಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕರಾದ ಸಂಜಯ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಜಗದೀಶ ಮೆಟಗುಡ್ಡ, ವಿಶ್ವನಾಥ ಪಾಟೀಲ, ಬಸವರಾಜ ಯಂಕಂಜಿ, ಬಸವರಾಜ ಹುಂದ್ರಿ, ಬಾಗಲಕೋಟೆ,ವಿಜಯಪುರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ ಸ್ವಾಗತಿಸಿದರು ಶಿವಾನಂದ ಹನುಮಸಾಗರ ನಿರೂಪಿಸಿದರು. ವೀರಭದ್ರ ಪೂಜಾರಿ ವಂದಿಸಿದರು.