ಗೋಕಾಕ:
ದೇವಸ್ಥಾನದ ಬಂಗಾರವನ್ನು ಬಿಡದ ಕಳ್ಳರು ಹಾಡು ಹಗಲೇ ಹೂಲಿಕಟ್ಟಿ ಗ್ರಾಮದಲ್ಲಿ ಲಕ್ಷ್ಮೀ ದೇವಿ ಮಂಗಳಸೂತ್ರ ಕಳ್ಳತನ ಮಾಡಿದ ಘಟನೆ ಬುಧವಾರ ಹೂಲಿಕಟ್ಟಿ ಗ್ರಾಮದಲ್ಲಿ ಜರುಗಿದೆ.

ಬುಧವಾರದಂದು ಸಂಜೆ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಜನರಿದ್ದರು ಕಳ್ಳರು ಶ್ರೀದೇವಿಯ ಬಂಗಾರದ ಮಂಗಳಸೂತ್ರವನ್ನು ಖದೀಮರು ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.