ಮೂಡಲಗಿ: 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ನ.23 ಮತ್ತು 24 ರಂದು ಎರಡು ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.
ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅವರು ಸಮ್ಮೇಳನಾಧ್ಯಕ್ಷರಾಗಿರುವರು. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸಿವರು. ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಉದ್ಘಾಟಿಸವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.