ಬೆಳಗಾವಿ : ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಡೆಸಿದ ಟೂಲ್ ಕಿಟ್ ಹಾಗೂ ಜಾತಿ ರಾಜಕಾರಣದ ಷಡ್ಯಂತ್ರವನ್ನು ಅಲ್ಲಿನ ಮತದಾರರು ತಿರಸ್ಕರಿಸಿದ್ದಾರೆ. ಸತತ ಮೂರನೇ ಬಾರಿಗೆ ಜನ ಬಿಜೆಪಿಗೆ ಆರ್ಶಿವಾದ ಮಾಡಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ, ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದ ಬಳಿಕ ಚುನಾವಣೆ ನಡೆದಿದೆ. ಅಲ್ಲಿ ಅಭಿವೃದ್ಧಿ ಕೆಲಸಗಳೂ ನಡೆಯುತ್ತಿವೆ. ಜಮ್ಮು- ಕಾಶ್ಮೀರದಲ್ಲಿಯೂ ಜನರು ನಿರೀಕ್ಷೆಗೆ ಮೀರಿದ ಯಶಸ್ಸು ನೀಡಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸ ಇಟ್ಟು ಈ ಎರಡು ರಾಜ್ಯಗಳ ಜನರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರತಿಕ್ರಿಯೆ ನೀಡಿದ್ದಾರೆ.