ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಇನ್ನೂ ಕೆಲವು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.