ಉಡುಪಿ: ಪಂಚಮಿ ಟ್ರಸ್ಟ್ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ಪಂಚಮಿ ಪುರಸ್ಕಾರಕ್ಕೆ ಚಿತ್ರನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ.
ಪುರಸ್ಕಾರವು ₹ 1 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಒಳಗೊಂಡಿದೆ. ಜನವರಿ ತಿಂಗಳ ಮೊದಲ ವಾರದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿರುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ವಿಶ್ವನಾಥ ಶೆಣೈ, ನಾಗರಾಜ್ ಹೆಬ್ಬಾರ್, ವಿಶ್ಲೇಶ್ವರ ಅಡಿಗ, ಜನಾರ್ದನ ಕೊಡವೂರು ಉಪಸ್ಥಿತರಿದ್ದರು.