ಮಂಗಳೂರು : ಕಾಂಗ್ರೆಸ್ ಶಾಸಕರು ಇರುವಲ್ಲಿ ಬಿಜೆಪಿ ತನ್ನದೇ ಶಾಸಕರ ಮೂಲಕ ಅಧಿಕಾರ ಸ್ಥಾಪಿಸಲು ಪರಿಷತ್ ಆಯ್ಕೆಯನ್ನು ನೆಚ್ಚಿಕೊಂಡಿದೆ. ಈ ಮೊದಲು ಬೆಳ್ತಂಗಡಿ ಮೂಲದವರಾದ ಪ್ರತಾಪ್ಸಿಂಹ ನಾಯಕ್ ಅವರನ್ನು ಇದೇ ಕಾರಣಕ್ಕೆ ಪರಿಷತ್ಗೆ ಆಯ್ಕೆಯಾಗುವಂತೆ ನೋಡಿಕೊಳ್ಳಲಾಗಿತ್ತು. ಅವರನ್ನು ಮಂಗಳೂರು ಕ್ಷೇತ್ರ (ಉಳ್ಳಾಲ) ಕೇಂದ್ರೀಕರಿಸಿ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದ ಪರ್ಯಾಯ ಅಧಿಕಾರ ಸೃಷ್ಟಿ ಹಾಗೂ ಪಕ್ಷ ಸಂಘಟನೆಗೆ ಅವರನ್ನು ಬಳಸಿಕೊಳ್ಳುವುದು ಮೂಲ ಉದ್ದೇಶವಾಗಿತ್ತು ಎನ್ನುತ್ತಾರೆ ಬಿಜೆಪಿ ರಾಜ್ಯ ನಾಯಕರು.
ಇದೇ ಮಾದರಿಯಲ್ಲಿ ಈಗ ಪುತ್ತೂರಿನಲ್ಲಿ ಬಿಜೆಪಿ ಶಾಸಕರ ಕೊರತೆ ನೀಗಿಸಲು ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಟಿಕೆಟ್ ನೀಡಿದೆ. ಸ್ಥಳೀಯಾಡಳಿತ ಮತದಾರರನ್ನು ಗಮನಿಸಿದರೆ, ಬಿಜೆಪಿ ಬೆಂಬಲಿತರ ಸಂಖ್ಯಾ ಬಲ ಅಧಿಕವಾಗಿದ್ದು, ಈ ಭರವಸೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸರಿಸಾಟಿಯಾದ ಬಿಜೆಪಿ ಶಾಸಕರನ್ನು ಇಂಗಿತವನ್ನು ಪಕ್ಷ ನಾಯಕರು ಹೊಂದಿದ್ದಾರೆ.