ಕೋಟ : ಇಲ್ಲಿನ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ವಿನಿತಾ ಸುಜಯೀಂದ್ರ ಹಂದೆ ಅವರು ಅನುದಾನ ರಹಿತ ಶಾಲೆಗಳ ಶಿಕ್ಷಕರ ರುಪ್ಸಾ ಸಂಘಟನೆಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅ. 21ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ವೃತ್ತಿಜೀವನ ಪ್ರಾರಂಭಿಸಿದ ಅವರು ಪ್ರಸ್ತುತ ವಿವೇಕ ಆಂಗ್ಲಮಾಧ್ಯಮ
ಪ್ರೌಢಶಾಲೆಯಲ್ಲಿ ಗಣಿತ, ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯಕ್ಷಗಾನ, ನಾಟಕ, ಭರತನಾಟ್ಯದಲ್ಲಿ ಆಸಕ್ತಿ ಹೊಂದಿರುವ ಅವರು, ವಿದ್ಯಾರ್ಥಿಗಳನ್ನು ವಿಜ್ಞಾನ ಮಾದರಿ ತಯಾರಿಕೆ, ವಿಜ್ಞಾನ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಲು ವಿಶೇಷ ತರಬೇತಿ ನೀಡಿ ಬಹುಮಾನ ಗಳಿಸಲು ಕಾರಣರಾಗಿದ್ದಾರೆ.