ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅ.22ರಂದು ಸಂಜೆ 4 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ. ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರ ಕಾರ್ಯಕ್ರಮ ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ.
ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಫೈರ್ ಶೋ ಹಾಗೂ ಶಾಡೋ ಆ್ಯಕ್ಟ್ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್ಲರಿಗೂ ಉಚಿತ ಪ್ರವೇಶವಿದೆ ಎಂದು ತಿಳಿಸಿದ್ದಾರೆ.