ಬೆಳಗಾವಿ; ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪಂಕಜಾ ರೇವಣಕರ ಅವರು ರಾಜ್ಯ ಮಟ್ಟದ ಪ್ಯಾರಾ ಈಜು ಚಾಂಪಿಯನ್‌ಷಿಪ್ ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಫರಡೆರೇಷನ ಆಫ್ ಪ್ಯಾರಾ ಸ್ವಿಮ್ಮಿಂಗ್ ಇಂಡಿಯಾ ಅಡಿಯಲ್ಲಿ ಕರ್ನಾಟಕ ಪ್ಯಾರಾ ಸ್ವಿಮ್ಮಿಂಗ್ ಅಸೋಸಿಯಷನ್ ಆಯೋಜಿಸಿದ್ಸ ರಾಜ್ಯಮಟ್ಟದ ಪ್ಯಾರಾ ಈಜು ಚಾಂಪಿಯನ್‌ಶಿಪ್ ನಲ್ಲಿ ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಪಡೆದುಕೊಳ್ಳುವುದರ ಜತೆಗೆ ರಾಷ್ಟ್ರೀಯ ಮಟ್ಟದ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಳ್ಳುವ ಮೂಲಕ ವಿಶೇಷವಾದ ಸಾಮಥ್ಯವನ್ನು ಪ್ರದರ್ಶಿಸಿರುವ ಪಂಕಜಾ ಬಿಮ್ಸ್ ಗೆ ಕೀರ್ತಿ ತಂದಿದ್ದಾರೆ.
ಬಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಮತ್ತು ಮುಖ್ಯ ಆಡಳಿತ ಅಧಿಕಾರಿ ಸಿದ್ದು ಹುಲ್ಲೋಳಿ, ಎಲ್ಲ ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿನಿಯನ್ನು ಅಭಿನಂದಿಸಿರುತ್ತಾರೆ.