ಬೆಳಗಾವಿ : ಯರಗಟ್ಟಿ ಸಮೀಪದ ಮದ್ಲೂರ ಗ್ರಾಮದ ರೈತ ಮಹಿಳೆ ಹೊಲದಲ್ಲಿ ಕೂಲಿ ಕೆಲಸ ಮಾಡುವ ವೇಳೆ ಹಾವು ಕಡಿದು ಮೃತಪಟ್ಟಿದ್ದಾರೆ.
ಫಕ್ಕೀರವ್ವ ಫಕ್ಕೀರಪ್ಪ ಹೂಲಿ (49) ಎನ್ನುವವರು ಕಬ್ಬಿನ ಹೊಲದಲ್ಲಿ ಹುಲ್ಲು ಕೀಳುವಾಗ ಹಾವು ಕಡಿತಕ್ಕೆ ಒಳಗಾಗಿದ್ದಾರೆ ಸರಕಾರಿ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಮುರಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ವಿಷಯ ತಿಳಿದ ಕೂಡಲೇ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ರೈತ ಮಹಿಳೆ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ದಾಖಲಾತಿಗಳ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.