ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ 2024 ಟೆಸ್ಟ್ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹರ್ಷಿತ್ ರಾಣಾ ಮತ್ತು ನಿತೀಶಕುಮಾರ ರೆಡ್ಡಿ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಣಾ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯುತ್ತಮವಾದ ಋತುವನ್ನು ಹೊಂದಿದ್ದಾರೆ, ಅಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ಗಾಗಿ ಆಡುವ 2024 ರ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಒಬ್ಬರಾಗಿದ್ದಾರೆ. ಮತ್ತೊಂದೆಡೆ ನಿತೀಶರೆಡ್ಡಿ ಅವರು ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿ ಉತ್ತಮ ಆಟ ಆಡಿದ್ದಾರೆ. ಅವರು ಉತ್ತಮ ಆಲ್ರೌಂಡರ್ ಆಗಿ ಹೊರಹೊಮ್ಮಿದ್ದಾರೆ.
ಕುತೂಹಲಕಾರಿಯಾಗಿ, ಕುಲದೀಪ ಯಾದವ್ ತಂಡದಿಂದ ಹೊರಗುಳಿದಿದ್ದಾರೆ. ಅವರು ಫಿಟ್ನೆಸ್ ಕಾರಣಕ್ಕೆ ತಂಡದಿಂದ ಹೊರಗುಳಿದಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್) , ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್. ಸಿರಾಜ್, ಆಕಾಶ ದೀಪ, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತೀಶಕುಮಾರ ರೆಡ್ಡಿ, ವಾಷಿಂಗ್ಟನ್ ಸುಂದರ್.
ಕಾಯ್ದಿಟ್ಟ ಆಟಗಾರರು : ಮುಖೇಶಕುಮಾರ, ನವದೀಪ್ ಸೈನಿ, ಖಲೀಲ್ ಅಹ್ಮದ್