ಕುಂದಾಪುರ : ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ(ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.

ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ ಅದರಂತೆ ಇಂದು ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಇಬ್ಬರು ಯುವಕರು ಕುಂದಾಪುರ ಕಡಲತೀರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯುವಕರು ಮತ್ತು ಅವರ ಕುಟುಂಬದವರು ಇದ್ದರು.