ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಭಾನುವಾರ ಜರುಗಿದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ವೇದಿಕೆಯಿಂದ ನಿರ್ಗಮಿಸುತ್ತಿದ್ದ ವೇಳೆ ಕಲಾವಿದರೊಬ್ಬರು ಹೃದಯಾಘಾತವಾಗಿ ಮೃತಪಟ್ಟರು.
ಬಸಾಪುರ ಗ್ರಾಮದ ಈರಪ್ಪ ಫಕ್ಕೀರಪ್ಪ ಬಬಲಿ (48) ಮೃತ ಕಲಾವಿದ. ಅವರು ವೇದಿಕೆಯಿಂದ ಇಳಿಯುವಾಗ ಹೃದಯಾಘಾತವಾಗಿ ಕುಸಿದು ಬಿದ್ದು ಅಸುನೀಗಿದರು.
ತಂಡದ ಸದಸ್ಯರೊಂದಿಗೆ ಭಾಗಿಯಾಗಿದ್ದ ಅವರು ಹಾಡು ಮುಗಿದ ನಂತರ ಕೈಯಲ್ಲಿ ಹಿಡಿದ ತಾಳದೊಂದಿಗೆ ಇಳಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಅಲ್ಲಿಯೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.