ಬೆಳಗಾವಿ:ಬೆಳಗಾವಿ ಜಿಲ್ಲೆಯ ಖ್ಯಾತ ಸಾಹಿತಿ ಬಾಳ ಸಾಹೇಬ ಲೋಕಾಪುರ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಶಿರಹಟ್ಟಿಯವರಾದ ಲೇಖಕ ಬಾಳಾಸಾಹೇಬ ಲೋಕಾಪುರ 1955ರಲ್ಲಿ ಜನಿಸಿದರು. ನವೋತ್ತರ ಸಾಹಿತಿಗಳಾದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಭೂಗೋಳ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ‘ಆಧುನಿಕ ಕನ್ನಡ ಕಥನ ಸಾಹಿತ್ಯದಲ್ಲಿ ಜೈನ ಸಂವೇದನೆ’ ವಿಷಯದಲ್ಲಿ ಪಿಹೆಚ್ ಡಿ ಪಡೆದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಇವರು ಬಹುದೊಡ್ಡ ಹೆಸರು ಗಳಿಸಿದ್ದಾರೆ.