ಬೆಂಗಳೂರು : ಯು ಎ ಇ ಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿದ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.

ಹೊರನಾಡು – ಹೊರದೇಶ ವಿಭಾಗದಲ್ಲಿ ಡಾ. ತುಂಬೆ ಮೊಯ್ದಿನ್ ಅವರ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವೆಂಬರ್ 1 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಡಾ. ತುಂಬೆ ಮೊಯ್ದಿನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.