ಅರಸಮ್ಮಕಾನು : ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶೇಡಿಮನೆ-ಅರಸಮ್ಮಕಾನು ನವಶಕ್ತಿ ಯುವಕ ಮಂಡಲ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ,ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ,ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಯುವಶಕ್ತಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ 13 ನೇ ವರ್ಷದ ರಕ್ತದಾನ ಶಿಬಿರ ಅರಸಮ್ಮಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.3ನೇ ಭಾನುವಾರ ಬೆಳಗ್ಗೆ ಗಂ 9 ರಿಂದ ನಡೆಯಲಿದೆ.
ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಸೂರ್ಗೋಳಿ ಇವರು ನೆತ್ತರ ನೆರವು ರಕ್ತದಾನ ಶಿಬಿರವನ್ನು ಉದ್ಘಾಟಿಸಲಿದ್ದಾರೆ.ಅರಸಮ್ಮಕಾನು ನವಶಕ್ತಿ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.ಮಡಾಮಕ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಸ್ಥಾಪಾಕಾಧ್ಯಕ್ಷ ಸತೀಶ್ ಸಾಲಿಯಾನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಘಟಕದ ಅಧ್ಯಕ್ಷ ಎಸ್ ಜಯಕರ ಶೆಟ್ಟಿ, ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಮಡಾಮಕ್ಕಿ ಗ್ರಾಮ ಪಂಚಾಯಿತಿ ಸದಸ್ಯ ಸದಾನಂದ ಪೂಜಾರಿ, ಅರಸಮ್ಮಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಶ್ರೀಕಾಂತ ಆಚಾರ್ಯ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಶಿಬಿರದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.