• ಬೆಳಗಾವಿ : ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ನ.5 ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಮುಂಜಾನೆ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೇಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ಸಂಜೆ 5 ಗಂಟೆಗೆ ಗಾಂಧಿ ಶತಮಾನೋತ್ಸವ ಕುರಿತು ಸಭೆ ಜರುಗಿಸುವರು ಎಂದು ಪ್ರಕಟಣೆ ತಿಳಿಸಿದೆ.