ಹಾವೇರಿ : ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದಲ್ಲಿ ನಡೆದಿದೆ.

ರೈತನ ನಾಲ್ಕು ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿತ್ತು ಎನ್ನಲಾಗಿದೆ. ಇದರಿಂದ ನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರನಗಿ ಗ್ರಾಮದ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ರೈತರ ಜಮೀನನ್ನು ವಕ್ಫ್ ಕಬಳಿಸುತ್ತಿದ್ದು, ರೈತರ ಗತಿ ಏನು? ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.