ಸಂಡೂರು : ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯನ್ನು ಭಯಮುಕ್ತ ಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದನ್ನು ಮರೀಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ನೇರಾ ಬಹಿರಂಗವಾಗಿ ಎಚ್ಚರಿಕೆ ನೀಡಿದರು.
ಸಂಡೂರಿನ ವಿಠಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರ ಪರವಾಗಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜನಾರ್ದನರೆಡ್ಡಿಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು.
ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು ? ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಗೆದ್ರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ. ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡೋಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ , ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗೋದಿಲ್ವಾ ನಿಮಗೆ ಎಂದು ಖಾರವಾಗಿ ಪ್ರಶ್ನಿಸಿದರು.
*ಸಂತೋಷ್ ಲಾಡ್ ಅವರ ಬುಲೆಟ್ ಮಾತುಗಳು…
*ಬಡವರ ಪಾಲಿನ ಪಾಂಡುರಂಗ ಮುಖ್ಯಮಂತ್ರಿ ಸಿದ್ದರಾಮಯ್ಯ
*ಅವತ್ತು ಇಂದಿರಾಗಾಂಧಿ-
ಇವತ್ತು ಸಿದ್ದರಾಮಯ್ಯ ಅವರು ಕೊಟ್ಟ ಕಾರ್ಯಕ್ರಮಗಳನ್ನು ಬಿಟ್ಟರೆ ಬಿಜೆಪಿಯ ಯಾವ ಕಾರ್ಯಕ್ರಮ ರಾಜ್ಯದಲ್ಲಿದೆ?*TB ಡ್ಯಾಂನಿಂದ ಸಂಡೂರಿನ 136 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸಿದ ಭಗೀರತ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ
*ಜನಾರ್ದನರೆಡ್ಡಿಯವರೇ ನಿಮಗೆ ದೇವರು ನಾಲಗೆ ಕೊಟ್ಟಿದ್ದಾನೆ ಅಂತ ಸಿದ್ದರಾಮಯ್ಯ ಅವರ ವಯಸ್ಸಿಗೆ, ಘನತೆಗೂ, ಚರಿತ್ರೆಗೂ ಬೆಲೆ ಕೊಡದೆ ವೈಯುಕ್ತಿಕವಾಗಿ ಏಕವಚನದಲ್ಲಿ ಮಾತನಾಡಬೇಡಿ. ಯಡಿಯೂರಪ್ಪ ಅವರಿಗೂ ಹೀಗೇ ಏಕವಚನದಲ್ಲಿ ಮಾತನಾಡಿದ್ರಿ. ಇದರಿಂದ ನಿಮಗೆ ಖುಷಿ ಸಿಗಬಹುದು. ಆದರೆ ಒಳ್ಳೇದಾಗಲ್ಲ
*ಇಂಥಾ ಜನಾರ್ದನರೆಡ್ಡಿಗೆ ಸರಿಯಾದ ಪಾಠ ಕಲಿಸಿ ಕಾಂಗ್ರೆಸ್ಸಿನ ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿ
ಬಿಜೆಪಿ, RSS ಪರಿವಾರದ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ
*ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ: ಸಿಎಂ ವ್ಯಂಗ್ಯ
ಸಂಡೂರು : ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಹೈಲೈಟ್ಸ್ ಗಳು…
ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.
ಬಿಜೆಪಿ, RSS ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.
*ನಮ್ಮ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ
8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ವರ್ಷಕ್ಕೆ 56 ಸಾವಿರ ಕೋಟಿ ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
*ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ*
*ಈ.ತುಕಾರಾಮ್ ಸಂಸದರಾಗಿದ್ದಾರೆ. ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ.
*ಇಲ್ಲಿ ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ. ಸಂತೋಷ್ ಲಾಡ್ ಗೆದ್ದ ಹಾಗೆ.
*ಸಂತೋಷ್ ಲಾಡ್ ಅವರ ಪ್ರಶ್ನೆ*
*ರಾಮುಲು, ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಶಾಸಕರು-ಸಚಿವರಾಗಿದ್ರು. ಶಾಂತಕ್ಕ, ದೇವೇಂದ್ರಪ್ಪ ಸಂಸದರಾಗಿದ್ದರು. ಇವರೆಲ್ಲಾ ಸೇರಿ ಬಳ್ಳಾರಿಗೆ ಏನು ಕೊಟ್ರು ಅನ್ನೋದನ್ನು ಹುಡುಕಿ ಹೇಳಿ. ಏನೇನೂ ಕೊಟ್ಟಿಲ್ಲ.