ಆರ್ಡಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಸಂಯುಕ್ತ ಆಶ್ರಯದಲ್ಲಿ ಕನ್ನಡದ ತೇರು ಸರಣಿ ಕಾರ್ಯಕ್ರಮವು ಚಾರ್ಮಾಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಪ್ರೌಢ ಶಾಲೆ ಆರ್ಡಿಯಲ್ಲಿ ನ. 16 ರಂದು ನಡೆಯಿತು.
ಹೆಬ್ರಿ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಗಂಗಾಧರ ರಾವ್ ಹೆಬ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಶಾಲೆಗಳ ಪಠ್ಯದೊಂದಿಗೆ ಸಾಹಿತ್ಯ, ವಿಚಾರ ಕಮ್ಮಟಗಳನ್ನು ಏರ್ಪಡಿಸುವುದು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸೃಜನಶೀಲತೆ ಬೆಳೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು.
ಅವರು ಹಲವು ವರ್ಷಗಳಿಂದ ಶಾಲೆ ಶಾಲೆಗಳಲ್ಲಿ ಕನ್ನಡದ ಬೆಳವಣಿಗೆಗೆ ವಿದ್ಯಾರ್ಥಿಗಳನ್ನು ಸಂಘಟಿಸುತ್ತಾ, ಸ್ಪರ್ಧೆಗಳನ್ನು ಏರ್ಪಡಿಸಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಈ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕವನ ವಾಚನ,ಭಾಷಣ, ಗೀತ ಗಾಯನ, ಪ್ರಬಂಧ, ಕವಿಗಳನ್ನು ಗುರುತಿಸುವಿಕೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ 27 ಮಂದಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿ ಪತ್ರವನ್ನು ಮತ್ತು ಪದಕಗಳನ್ನು ಕೊಡುಗೆಯಾಗಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಯುವ ಸಾಹಿತಿ ನವೀನ್ ಶೆಟ್ಟಿ ಮಡಾಮಕ್ಕಿ ಅವರು, ಸಂಸ್ಕಾರ ಮತ್ತು ಮೌಲ್ಯಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.ಅವರನ್ನು ಕ. ಸಾ. ಪ. ಘಟಕ ವತಿಯಿಂದ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕ. ಸಾ. ಪ ಘಟಕ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಮಾತನಾಡಿ, ಕನ್ನಡ ತೇರು ಕಾರ್ಯಕ್ರಮದ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡದ ಬೆಳವಣಿಗೆಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ವದಾಗಿದೆ. ಭವಿಷ್ಯದ ನಿರ್ಮಾತೃಗಳಾದ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಆಳವಾಗಿ ಅರಿತುಕೊಂಡು ಅದನ್ನು ಪ್ರತಿನಿತ್ಯದ ಜೀವನದಲ್ಲಿ ಬಳಸುವ ಮೂಲಕ ಭಾಷೆಯನ್ನು ಉಳಿಸಬಹುದು. ಇತರ ಭಾಷೆಯನ್ನು ದ್ವೇಷಿಸದೆ ಕನ್ನಡ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ಮೂಲಕ ಕನ್ನಡವನ್ನು ಪ್ರೀತಿಸಬೇಕೆಂದು ಹೇಳಿದರು.
ಆರ್ಡಿ ಹೈಸ್ಕೂಲಿನ ನಿವೃತ್ತ ಮುಖ್ಯೋಪಾಧ್ಯಾಯ ಶೇಖರ ಶೆಟ್ಟಿಗಾರ್, ನಿವೃತ್ತ ಕುಕ್ಕುಜೆ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮಣ್ ಕುಕ್ಕುಜೆ,ಬೆಳ್ವೆ ಜನ ಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ ಮತ್ತು ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಶಾಲಾ ಅದ್ಯಾಪಕ ಪ್ರಕಾಶ್ ಭಟ್ ಮಾತನಾಡಿದರು.
ಕನ್ನಡ ಅದ್ಯಾಪಕ ಜಯಶೀಲ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಶ್ರೀಕಾಂತ್ ವಂದಿಸಿ, ಸೃಜನ್ ಸಹಕರಿಸಿದರು.ಶಾಲಾ ಅಧ್ಯಾಪಕರು ಹಾಜರಿದ್ದರು.