ಬೆಳಗಾವಿ : ಬೆಳಗಾವಿಯ ಪ್ರತಿಷ್ಠಿತ ಬಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ ಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ನಗರದ ಬಿಮ್ಸ್ ಆವರಣದಲ್ಲಿ ಮಂಗಳವಾರ ನಡೆದಿದೆ.

ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಕಲ್ಪನಾ ರಾಠೋಡ ಮೃತಪಟ್ಟ ಬಾಣಂತಿ. ಸೋಮವಾರ ರಾತ್ರಿ ಕಲ್ಪನಾಗೆ ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಲಾಗಿತ್ತು. ತಾಯಿ ಮತ್ತು ಮಗು ಆರೋಗ್ಯವಾಗಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಮಂಗಳವಾರ ಮಧ್ಯಾಹ್ನದ
ನಂತರ ಬಾಣಂತಿಯ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗಿದ್ದಾರೆ.
ವೈದ್ಯರ ನಿರ್ಲಕ್ಷ್ಯ ದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟಿಸಿದರು. ‘ಮಹಿಳೆಗೆ ಎರಡೆರಡು ಬಾರಿ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಲಾಗಿದೆ. ಇದನ್ನು ಸಹ ತರಾತುರಿಯಲ್ಲಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಮವಸ್ತ್ರ ಧರಿಸಿಲ್ಲ. ಸಿಜೇರಿಯನ್ ಆಪರೇಷನ್ ಧರಿಸುವ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ತಪಾಸಣೆಗೆ ಬೇರೆ ಆಸ್ಪತ್ರೆಗೆ ಹೋಗಲು ಅವಕಾಶ ನೀಡುವಂತೆ ಕೇಳಿದರೂ ವೈದ್ಯರು ಡಿಸ್ಟಾರ್ಜ್ ಮಾಡಿಲ್ಲ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಈ ಕೂಡಲೇ ವಜಾ ಮಾಡಬೇಕು ಎಂದು ಪಟ್ಟು ಹಿಡಿದರು.

ಈ ಪ್ರಕರಣವನ್ನು
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಮೂರು ಜನರ ನೇತೃತ್ವದಲ್ಲಿ ಕಮಿಟಿ ಮಾಡಿ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ಥ ವೈದ್ಯರ ವಿರುದ್ದ ಪೊಲೀಸ್‌ ಕೇಸ್ ದಾಖಲಿಸಿ ಜರುಗಿಸಲಾಗುವುದು. ಕ್ರಮ
ಜರುಗಿಸಲಾಗುವುದು ಎಂದು ಬಿಮ್ಸ್ ನಿರ್ದೇಶಕ
ಅಶೋಕ ಶೆಟ್ಟಿ ತಿಳಿಸಿದರು.

ಆಸ್ಪತ್ರೆಗೆ ಬಂದ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಅವರಿಗೆ ಘೇರಾವ್ ಹಾಕಿದ ಕುಟುಂಬಸ್ಥರು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.