ಗುಂಡ್ಮಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾತಿವನ ಟ್ರಸ್ಟ್ (ರಿ) ವತಿಯಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಗುಂಡ್ಮಿ, ಸಾಸ್ತಾನ ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿ ಅಧ್ಯಯನನು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಧರ್ಮಸ್ಥಳದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾನೆ.ಶಾಲಾ ಮುಖ್ಯ ಶಿಕ್ಷಕ ಕೆ. ಸತೀಶ ಐತಾಳ್ ಹಾಗೂ ಸಿಬ್ಬಂದಿ ವರ್ಗ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.