ಪುಣೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಬಾರಾಮತಿಯಲ್ಲಿ ‘ಭವಿಷ್ಯದ ಮುಖ್ಯಮಂತ್ರಿ’ ಅಜಿತ್ ಪವಾರ್ ಎಂದು ಬರೆದಿರುವ ಪೋಸ್ಟರ್ಗಳನ್ನು ಹಾಕಲಾಗಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಎನ್ಸಿಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು “ಭವಿಷ್ಯದ ಮುಖ್ಯಮಂತ್ರಿ” ಎಂದು ಬಣ್ಣಿಸುವ ಪೋಸ್ಟರ್ಗಳನ್ನು ಬಾರಾಮತಿಯಲ್ಲಿ ಹಾಕಲಾಗಿತ್ತು. ಸಿಎಂ ಮುಖದ ಆಯ್ಕೆಯಲ್ಲಿ ಈಗಾಗಲೇ ಆಡಳಿತಾರೂಢ ಮಹಾಯುತಿ ಮತ್ತು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವೆ ಬಿರುಕು ಕಾಣಿಸಿಕೊಂಡಿರುವುದನ್ನು ಇದು ಪ್ರತಿಬಿಂಬಿಸುತ್ತದೆ. ನವೆಂಬರ್ 23ರ ಶನಿವಾರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಎನ್ಡಿಎ ಬಣದ ಶಿವಸೇನಾ ನಾಯಕ ಏಕನಾಥ ಶಿಂದೆ ಮುಖ್ಯಮಂತ್ರಿಯಾಗಿದ್ದಾರೆ. ಎನ್ಸಿಪಿಯ ಅಜಿತ್ ಪವಾರ್ ಹಾಗೂ ಬಿಜೆಪಿಯ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಗಳಾಗಿದ್ದಾರೆ.
ಹೆಚ್ಚಿನ ಸಮೀಕ್ಷೆಗಳು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಧಿಕಾರಕ್ಕೆ ಬರಲಿವೆ ಎಂದು ಸಮೀಕ್ಷೆ ನುಡಿದಿವೆ. ಆದರೂ, ಮುಂದಿನ ಹೊಸ ಸರಕಾರದ ಸಾರಥಿ ಯಾರಾಗಬಹುದು ? ಒಂದು ವೇಳೆ ಎನ್ ಡಿಎ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಕುತೂಹಲ ವ್ಯಾಪಕವಾಗಿ ಮೂಡಿದೆ.